ತುಮಕೂರು: ತುಮಕೂರಿನಲ್ಲಿ (Tumkur news) ಬೆಳ್ಳಂಬೆಳಗ್ಗೆ ಭೀಕರ ಅಪಘಾತ (Road Accident) ಸಂಭವಿಸಿದೆ. ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಪಕ್ಕದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ರಸ್ತೆ ಅಪಘಾತ ಸಂಭವಿಸಿದೆ. ಬೆಳಗ್ಗಿನ ಜಾವ 4.30ರ ವೇಳೆಗೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಖಾಸಗಿ ಬಸ್ ನಲ್ಲಿ 29 ಜನರು ಪ್ರಯಾಣಿಸುತ್ತಿದ್ದರು.
ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.