ಬಳ್ಳಾರಿ: ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಯಲ್ಲಿ (Sandur Bypoll Result 2024) ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9,645 ಮತಗಳಿಂದ ವಿಜಯ ಪತಾಕೆ ಹಾರಿಸಿದ್ದಾರೆ.
ಒಟ್ಟು 19 ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು 93,606 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು (83961) ವಿರುದ್ಧ 9,645 ಮತಗಳ ಅಂತರದಿಂದ ಗೆಲುವು ಪಡೆದಿದ್ಧಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರು 85,233 ಮತಗಳಿಂದ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ (49,701) ವಿರುದ್ಧ ಗೆಲುವು ಪಡೆದಿದ್ದರು.
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಇ. ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್ನ ಇ. ತುಕಾರಾಮ್ (E Tukaram) ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು. ಹೀಗಾಗಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅವರ ಪತ್ನಿ ಅನ್ನಪೂರ್ಣ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ.

ಈ ಸುದ್ದಿಯನ್ನೂ ಓದಿ | Kota Srinivas Poojary: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಬಿಗ್ ರಿಲೀಫ್; ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು