Saturday, 10th May 2025

Selling Beef: ಸಂತೆಯ ಸ್ವೀಟ್‌ ಶಾಪ್‌ನಲ್ಲಿ ಗೋಮಾಂಸ ಮಾರಾಟ; ಅಸ್ಸಾಂ ಮೂಲದ ಇಬ್ಬರು ಅರೆಸ್ಟ್

Selling Beef

ಚಿಕ್ಕಮಗಳೂರು: ಸಂತೆಯಲ್ಲಿ ಸಿಹಿತಿಂಡಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಸಿಕ್ಕಿಬಿದ್ದಿರುವ ಘಟನೆ (Selling Beef) ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಬಣಕಲ್ ವಾರದ ಸಂತೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಗೋಮಾಂಸ ಮಾರಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತೆಯಲ್ಲಿ ಸಿಹಿ ತಿಂಡಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದ ಅಸ್ಸಾಂ ಮೂಲದ ವ್ಯಕ್ತಿಗಳು ಅದೇ ಅಂಗಡಿಯಲ್ಲಿ ಗೌಪ್ಯವಾಗಿ ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಬಣಕಲ್ ಪೊಲೀಸರು ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರ ಗಮನಕ್ಕೆ ತಂದಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಗಡಿಯಲ್ಲಿ ಪರಿಶೀಲನೆ ನಡೆಸಿದಾಗ ಕಪ್ಪು ಬಣ್ಣದ ಬ್ಯಾಗ್ ಒಂದರಲ್ಲಿ ದನದ ಮಾಂಸದ ಪ್ಯಾಕೆಟ್‌ಗಳು ಕಂಡು ಬಂದಿದ್ದವು. ಹೀಗಾಗಿ ಅಸ್ಸಾಂ ಮೂಲದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಸ್ಥಳೀಯರು ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಬಣಕಲ್ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದಾರೆ. ಅಸ್ಸಾಂ ಮೂಲದವರಿಗೆ ಸಂತೆಯಲ್ಲಿ ವ್ಯಾಪಾರ ಮಾಡಲು ಲೈಸೆನ್ಸ್ ಕೊಟ್ಟಿದ್ದು ಯಾರು? ಅವರು ಲೈಸೆನ್ಸ್ ಪಡೆದು ವ್ಯಾಪಾರ ಮಾಡುತ್ತಿದ್ದಾರೋ, ಅಥವಾ ಅಕ್ರಮವಾಗಿ ವ್ಯಾಪಾರ ಮಾಡುತ್ತಿದ್ದಾರೋ ? ಈ ಬಗ್ಗೆ ಹಿಂದೆಯೇ ಪಂಚಾಯಿತಿ ಗಮನಕ್ಕೆ ತಂದಿದ್ದರೂ ಯಾಕೆ ಕ್ರಮ ವಹಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಬಾಂಗ್ಲಾ ಮೂಲದವರು ಅಸ್ಸಾಂ ಕಾರ್ಮಿಕರ ಹೆಸರಿನಲ್ಲಿ ಕಾಫಿ ಎಸ್ಟೇಟ್‌ಗಳಲ್ಲಿ ಸೇರಿಕೊಂಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ಇತ್ತೀಚಿನ ದಿನಗಳಲ್ಲಿ ಕಾಫಿನಾಡಿಗೆ ದೊಡ್ಡ ಪ್ರಮಾಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಬರುತ್ತಿದ್ದು, ಇದರಲ್ಲಿ ಬಹುತೇಕರು ಬಾಂಗ್ಲಾ ನುಸುಳುಕೋರರು ಎನ್ನಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ | K S Bhagawan: ಹಿಂದು ಅನ್ನೋದು ಅವಮಾನಕರ ಶಬ್ದ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್. ಭಗವಾನ್

ಆಟೋ ಚಾಲಕನಿಂದ ಅತ್ಯಾಚಾರದ ಬೆದರಿಕೆ, ವಿದ್ಯಾರ್ಥಿನಿ ಆತ್ಮಹತ್ಯೆ

kalaburagi crime news

ಕಲಬುರಗಿ: ಆಟೋ ಚಾಲಕ ಮೆಹಬೂಬ ಎಂಬಾತ ಬಾಲಕಿಯೊಬ್ಬಳಿಗೆ ಅತ್ಯಾಚಾರದ (Physical Abuse) ಬೆದರಿಕೆ ಹಾಕಿದ ಪರಿಣಾಮ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಕುರಿತು ದೂರು ಕಲಬುರಗಿಯಲ್ಲಿ (Kalaburagi Crime News) ದಾಖಲಾಗಿದೆ.

ಅತ್ಯಾಚಾರ ಬೆದರಿಕೆಯಿಂದ ಹೆದರಿ, ಮನನೊಂದು 8ನೇ ತರಗತಿ ವಿದ್ಯಾರ್ಥಿನಿ ಮಹಾಲಕ್ಷ್ಮಿ ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ಮೆಹಬೂಬ ಎಂಬಾತನ ಕಿರುಕುಳದಿಂದ ಬೇಸತ್ತು ಮಹಾಲಕ್ಷ್ಮಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಮಹಾಲಕ್ಷ್ಮಿ ಶಾಲೆಗೆ ಹಾಗೂ ಮನೆಗೆ ಹೋಗುವಾಗ ರಸ್ತೆಯಲ್ಲಿ ಹಿಂಬಾಲಿಸಿ ಬರುತ್ತಿದ್ದ ಈತ, ನನ್ನ ಜೊತೆ ಮಾತನಾಡದಿದ್ದರೆ ನಿನ್ನನ್ನು ಅತ್ಯಾಚಾರ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಹೀಗಾಗಿ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವಿದ್ಯಾರ್ಥಿನಿಯ ತಂದೆ ಯಶವಂತರಾಯಗೌಡ ಬಿರಾದಾರ ಆರೋಪಿಸಿ ದೂರು ನೀಡಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಅವರು ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *