ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ ಎಂದು ಆರೋಪಿಸಿ, ಶಿವಮೊಗ್ಗದಲ್ಲಿ (Shivamogga News) ಭಾರತೀಯ ಜನತಾ ಪಕ್ಷದಿಂದ (BJP) ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಾಗುತ್ತಿದ್ದರೂ, ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ಸುದ್ದಿಯನ್ನೂ ಓದಿ | Mysore News: ಹೊಸ ವರ್ಷಾಚರಣೆಗೆ ತಂದಿದ್ದ ಕೇಕ್ ತಿಂದು 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ವಿವಿಧ ಪ್ರಕೋಷ್ಠಕಗಳ ರಾಜ್ಯ ಸಂಚಾಲಕ ದತ್ತಾತ್ರಿ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿ ದೇವಿ, ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಹೇಮಂತ್ ಸೇರಿದಂತೆ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.