Sunday, 11th May 2025

ನೂತನ ಮಾಹಿತಿ ಆಯುಕ್ತರುಗಳಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭ ರಾಜ್ಯ ಮಾಹಿತಿ ಆಯೋಗದ ಹಂಗಾಮಿ ಆಯುಕ್ತ ಸಂತೋಷ್ ಎಲ್ ಪಾಟೀಲ್ ಅವರು ಸೇರಿದಂತೆ ನೂತನ ಸದಸ್ಯರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಕಾರ್ಯಕ್ರಮದ ಸ್ವಾಗತ ಹಾಗೂ ವಂದನಾರ್ಪಣೆ ನೆರವೇರಿಸಿದರು.