Monday, 12th May 2025

ಆಗಸ್ಟ್ 22ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಆಗಸ್ಟ್ 22ರಂದು ನಡೆಯಲಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು. ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಆ. 22ರಂದು ಬೆಳಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ಆ. 12ರಿಂದ ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *