Sunday, 11th May 2025

Thawar Chand Gehlot: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Thawar Chand Gehlot

ಬೆಂಗಳೂರು: ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ತರದ ವೈರಲ್ ಫೀವರ್‌ನಿಂದ ರಾಜ್ಯಪಾಲರು (Thawar Chand Gehlot) ಬಳಲುತ್ತಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯಪಾಲರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನೂ ಓದಿ | ಉತ್ತರ ಪ್ರದೇಶದಲ್ಲಿ ಶಾಲಾ ವಾಹನದ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ