ತುಮಕೂರು: ಸಂಬಂಧಿಕರ ಬರ್ತ್ ಡೇ ಪಾರ್ಟಿ ಮುಗಿಸಿ ಮನೆಗೆ ಮರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿರುವ ಘಟನೆ (Tumkur News) ನಗರದ ಯಲ್ಲಾಪುರದಲ್ಲಿ ನಡೆದಿದೆ. ಉಮಾ (50), ವಿನೋದ್ (24), ಮೃತ ದುರ್ದೈವಿಗಳು.
ಪಾವಗಡ ಮೂಲದ ಉಮಾ, ಕಳೆದ ಎರಡು ದಿನಗಳ ಹಿಂದೆ ತಂಗಿ ಮನೆಗೆ ಬಂದಿದ್ದರು. ಬುಧವಾರ ಸಂಜೆ ತಂಗಿ ಮಗ ವಿನೋದ್ ಜತೆ ಯಲ್ಲಾಪುರದಲ್ಲಿ ಸಂಬಂಧಿಕರೊಬ್ಬರ ಬರ್ತ್ ಡೇ ಪಾರ್ಟಿಗೆ ತೆರಳಿದ್ದರು. ರಾತ್ರಿ ಬರ್ತ್ ಡೇ ಪಾರ್ಟಿಯಲ್ಲಿ ಊಟ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ | Chincholi Hospital: ಚಿಂಚೋಳಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್‌ಪಿ ಮುದ್ರಿತ ಸಿರಪ್ ವಿತರಣೆ; ಕಾಳಸಂತೆಯಲ್ಲಿ ಔಷಧ ಮಾರಾಟ?
ಹೆಬ್ಬಾಳ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಮಹಿಳೆ ಮೃತ ದೇಹ ಪತ್ತೆ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಮಹಿಳೆಯೊಬ್ಬರ ಮೃತ ದೇಹ ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ತೆರಳಿ, ಮನೆಗೆ ವಾಪಸ್ ಬಾರದಿರುವಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿತ್ವಿಕ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಣಸಗಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ | Viral Video: ಆಸ್ತಿಯ ಆಸೆಗೆ ಬಿದ್ದ ಮಹಿಳೆಯಿಂದ ಹೆತ್ತವರ ಮೇಲೆಯೇ ದೌರ್ಜನ್ಯ; ತವರು ಮನೆಗೆ ಕಲ್ಲೆಸೆಯುವ ವಿಡಿಯೊ ವೈರಲ್