Wednesday, 14th May 2025

ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಪತ್ರಕರ್ತನ ಗುಂಡಿಕ್ಕಿ ಹತ್ಯೆ

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಪತ್ರಕರ್ತ ಅಜಯ್ ಲಾಲ್‌ವಾನಿ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಲಾಲ್‌ವಾನಿ ಅವರು ಸ್ಥಳೀಯ ಸುದ್ದಿವಾಹಿನಿ ಮತ್ತು ಉರ್ದು ದಿನಪತ್ರಿಕೆಯೊಂದರ ವರದಿಗಾರನಾಗಿ ಕಾರ್ಯನಿರ್ವಹಿಸು ತ್ತಿದ್ದರು. ಗುರುವಾರ ಸಿಂಧ್ ಪ್ರಾಂತ್ಯದ ಸುಕ್ಕೂರ್‌ ನಗರದ ಕ್ಷೌರದಂಗಡಿಯಲ್ಲಿ ಕುಳಿತಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಕೈಗಳು, ಹೊಟ್ಟೆ ಹಾಗೂ ಮೊಣಕಾಲಿಗೆ ಗಾಯಗಳಾಗಿದ್ದವು ಎಂದು ವರದಿ ಮಾಡಿದೆ. ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ವೈಯಕ್ತಿಕ ವೈಷಮ್ಯ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. […]

ಮುಂದೆ ಓದಿ