Sunday, 11th May 2025

ಚುನಾವಣೆ ಕರ್ತವ್ಯ ನಿರ್ವಹಿಸಿದ್ದ 135 ಶಿಕ್ಷಕರ ಸಾವು

ಲಕ್ನೋ : ಉತ್ತರ ಪ್ರದೇಶದಲ್ಲಿ ಪಂಚಾಯಿತಿ ಚುನಾವಣೆಗೆ ಹೋಗಿದ್ದ 135 ಶಿಕ್ಷಕರು ಮೃತಪಟ್ಟಿದ್ದಾರೆ. ಮತದಾನದ ವೇಳೆ ಕೋವಿಡ್ ನಿಯಮ ಪಾಲಿಸದಿರುವುದೇ ಈ ಘಟನೆಗೆ ಕಾರಣವೆನ್ನಲಾಗಿದೆ. ಅಲಹಾಬಾದ್ ಹೈಕೋರ್ಟ್ ಸ್ವಯಂ ಪ್ರೇರಿತವಾದ ಪ್ರಕರಣ ದಾಖಲಿಸಿಕೊಂಡಿದ್ದು, ಉತ್ತರ ಪ್ರದೇಶ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಕೋವಿಡ್ ನಿಯಮ ಪಾಲಿಸದ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದ್ದು, ಉತ್ತರ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.  

ಮುಂದೆ ಓದಿ