ಬ್ಯಾಂಕಾಕ್: ಭಾರತ-ಥಾಯ್ಲೆಂಡ್ ಜಂಟಿ ಆಯೋಗದ 9ನೇ ಸಭೆಯಲ್ಲಿ ಪಾಲ್ಗೊಳ್ಳಲು ಥಾಯ್ಲೆಂಡ್‌ನಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬ್ಯಾಂಕಾಕ್‌ನಲ್ಲಿರುವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಭಾರತ ಮತ್ತು ಥೈಲ್ಯಾಂಡ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವರ್ಷವನ್ನು ಆಚರಿಸುತ್ತಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ʻಬೆಳಗ್ಗೆ ಬ್ಯಾಂಕಾಕ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಈ ವೇಳೆ ಫ್ರಾ ಮಹಾರಾಜ ಗುರು ವಿಧಿ ಅವರ ಆಶೀರ್ವಾದ ಪಡೆದೆ. ಇದು ನಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು ಒತ್ತಿಹೇಳುತ್ತದೆʼ ಎಂದಿದ್ದಾರೆ. […]