Saturday, 17th May 2025

ಎಸ್ಐಟಿಯಲ್ಲಿ ಬಸವ ಜಯಂತಿ

ತುಮಕೂರು: ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೋಧಕ, ಬೋಧಕೇತರ ಸಂಘದವತಿಯಿಂದ ಜು.9ರಂದು ಬಿರ್ಲಾ ಸಭಾಂಗಣದಲ್ಲಿ ಬಸವ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಶ್ರೀ ಸಿದ್ದಲಿಂಗ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸುವರು,  ವೈದ್ಯ ನಂಜುಂಡಸ್ವಾಮಿ ಉಪನ್ಯಾಸ ನೀಡುವರು, ಎಸ್ಐಟಿ ನಿರ್ದೇಶಕ ಎಂ.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಿಇಒ ಶಿವಕುಮಾರಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪ್ರಾಂಶುಪಾಲ ದಿನೇಶ್ ಉಪಸ್ಥಿತರಿರುವರು. ಸಮಾರಂಭದ ನಂತರ ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿವತಿಯಿಂದ ಜಗಜ್ಯೋತಿ ಬಸವೇಶ್ವರ ಐತಿಹಾಸಿಕ ನಾಟಕ ಪ್ರದರ್ಶನಗೊಳ್ಳಲಿದೆ.

ಮುಂದೆ ಓದಿ