Saturday, 10th May 2025

Basavaraja Rayareddy

Basavaraja Rayareddy: ಸಾಮಾಜಿಕ,‌ ಶೈಕ್ಷಣಿಕ, ಆರ್ಥಿಕ ಗಣತಿ ವರದಿ ಬಿಡುಗಡೆಗೆ ಬಸವರಾಜ ರಾಯರೆಡ್ಡಿ ಆಗ್ರಹ

ಈ ಹಿಂದಿನ ಕಾಂಗ್ರೆಸ್ (Basavaraja Rayareddy) ಸರ್ಕಾರದಲ್ಲಿ ಕರ್ನಾಟಕದಲ್ಲಿ ನಡೆಸಲಾದ ಸಾಮಾಜಿಕ,‌ ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ವರದಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ದಿನಗಳ ಹಿಂದೆ ನಾನು ಸಿಎಂ ಭೇಟಿ ಮಾಡಿ, ಮಾತನಾಡಿದ್ದೇನೆ. ಮುಂದಿನ ವಾರವೇ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಪಡೆದು, ಕೂಡಲೇ ವರದಿ ಬಿಡುಗಡೆ ಮಾಡಬೇಕು. ನ.1 ರಿಂದ ಅನುಷ್ಠಾನಗೊಳಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಮುಂದೆ ಓದಿ