Sunday, 11th May 2025

ಬೆಣ್ಣೆ ಇಡ್ಲಿ ಶಿವಪ್ಪ ನಿಧನ

ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀರಂಗಪಟ್ಟಣ ತಾಲೂಕು ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿ ಶಿವಪ್ಪ ಶುಕ್ರವಾರ ನಿಧನರಾಗಿದ್ದಾರೆ. ಶಿವಪ್ಪ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಮಧ್ಯೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆದು ಸ್ಕೂಟರ್‌ನಿಂದ ಬಿದ್ದು ಗಾಯ ಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು. ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಬೆಣ್ಣೆ ಇಡ್ಲಿ ಶಿವಪ್ಪ ಕೊನೆಯುಸಿರೆಳೆದಿದ್ದಾರೆ. ಶಿವಪ್ಪ ಅವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ರುದ್ರಭೂಮಿಯಲ್ಲಿ […]

ಮುಂದೆ ಓದಿ