Tuesday, 13th May 2025

ಡ್ರಗ್ಸ್ ಜಾಲದ ನಂಟು: ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನಿಲ್ಲ

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿ ಸಹೋದರ ಶೌವಿಕ್ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದೆ. ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಲಿಂಕ್ ಇದೆ ಎನ್ನುವ ಆರೋಪ ಕೇಳಿ ಬಂದಿತ್ತು. ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಎನ್ ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿ ಹಾಗೂ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಹಲವರನ್ನು ಎನ್ ಸಿಬಿ ಬಂಧಿಸಿತ್ತು.  

ಮುಂದೆ ಓದಿ