ನವದೆಹಲಿ: ಕರೋನಾ ವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ಡಿ.2ರಂದು 1,25,37,82,269 ಡೋಸ್ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕರೋನಾ ವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 321 ದಿನಗಳಾಗಿದ್ದು, ಗುರು ವಾರ ವೇಳೆಗೆ 42,00,780 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಭಾರತವು ಕೊವಿಡ್-19 ಲಸಿಕೆ ವಿತರಣೆಯಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವ ದಲ್ಲಿ ಭಾರತವು ವಿಶ್ವದಲ್ಲಿ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯೆಲ್ […]