ಮುಂಬೈ: ಮಾಲ್‍ನಲ್ಲಿದ್ದ ಆಸ್ಪತ್ರೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಕೊರೊನಾ ಸೋಂಕಿತರು ಮೃತ ಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಭಂದೂಪ್ ಪ್ರದೇಶದಲ್ಲಿರುವ ಡ್ರೀಮ್ಸ್ ಮಾಲ್ ಸನರೈಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 70 ರೋಗಿಗಳನ್ನು ರಕ್ಷಿಸಿ ಬೇರೊಂದು ಆಸ್ಪತ್ರೆಗೆ ರವಾನಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಆದರೆ, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 20 ಕ್ಕೂ […]