ಬೆಂಗಳೂರು: ಮೈಸೂರಿನ ಮುಡಾ ಸೈಟುಗಳ ಹಗರಣದಲ್ಲಿ (MUDA case, Muda scam) ತನಿಖೆಗೆ ಇಳಿದಿರುವ ಜಾರಿ ನಿರ್ದೇಶನಾಲಯ (ED), ಈಗ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ (ED notice) ನೀಡಿದೆ. ಮುಡಾ ಅಕ್ರಮ ಆರೋಪದಲ್ಲಿ ಈಗಾಗಲೇ ಹಲವರನ್ನು ಇಡಿ ವಿಚಾರಣೆ ನಡೆಸಿದೆ. ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಆರೋಪ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇಡಿ ಜಾರಿಗೊಳಿಸಿರುವ ನೋಟಿಸ್‌ನಲ್ಲಿ ನಾಳೆ ಮುಡಾ ಅಕ್ರಮ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. […]