ಯಾದಗಿರಿ: ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ದಿ.ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ (EX MLA Venkatareddy Mudnal) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆತ್ಯಾಪ್ತ ಬಳಗದಲ್ಲಿದ್ದ ಮುದ್ನಾಳ ಅವರು ಕಳೆದ ವಿಧಾನಸಭಾ ಚುನಾವಣೆಯ ನಂತರ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಒಂದೂವರೆ ತಿಂಗಳ ಹಿಂದೆ […]