Monday, 12th May 2025

ರೈತರ ರಾಷ್ಟ್ರವ್ಯಾಪಿ ಭಾರತ್‌ ಬಂದ್‌’ಗೆ ಅಣ್ಣಾ ಹಜಾರೆ ಬೆಂಬಲ

ನವದೆಹಲಿ: ಕೇಂದ್ರದ ಕೃಷಿ ಮಸೂದೆ ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಭಾರತ್‌ ಬಂದ್‌’ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದ್ದಾರೆ.‌ ಮಹಾರಾಷ್ಟ್ರದ ಅಹಮದ್‌ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ದೇಶಾದ್ಯಂತ ಪ್ರತಿಭಟನೆ ನಡೆಯ ಬೇಕು’ ಎಂದು ಹೇಳಿದರು. ಈ ಆಂದೋಲನವು ದೇಶಾದ್ಯಂತ ವಿಸ್ತರಿಸಬೇಕೆಂದು […]

ಮುಂದೆ ಓದಿ