ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳ(2014 ರಲ್ಲಿ) ದ ಆರೋಪ ಹೊರಿಸಿ ರಾಜೀನಾಮೆ ನೀಡಿದ ನ್ಯಾಯಾಧೀಶೆಯನ್ನು ಮರುಸೇರ್ಪಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2014ರಲ್ಲಿ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿತ್ತು ಎಂಬ ಕಾರಣಕ್ಕೆ ಮಹಿಳಾ ನ್ಯಾಯಾಧೀಶರು ಮರು ಸೇರ್ಪಡೆ ಕೋರಿದ್ದರು. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್ .ಗವಾಯಿ ಅವರನ್ನೊಳಗೊಂಡ ಪೀಠ, ನ್ಯಾಯಾಧೀಶೆಯ ರಾಜೀನಾಮೆಯನ್ನು ಅಂಗೀಕರಿಸಿದ ಆದೇಶವನ್ನು ರದ್ದುಗೊಳಿಸಿತು. ಮಧ್ಯಪ್ರದೇಶದ ನ್ಯಾಯಾಂಗದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಅವರನ್ನು ಮರುನೇಮಕ ಗೊಳಿಸುವಂತೆ ನಿರ್ದೇ ಶಿಸಿತು. ಆದಾಗ್ಯೂ, ರಜೆ […]