Sunday, 11th May 2025

ಗ್ಯಾಸ್ ಟ್ಯಾಂಕರ್‌ ಉರುಳಿ ಸೋರಿಕೆ: ಶಿರಾಡಿ ಘಾಟ್ ನಲ್ಲಿ ಸಂಚಾರ ಬಂದ್

ಸಕಲೇಶಪುರ : ತಾಲೂಕಿನ ಮಾರನಹಳ್ಳಿ ಸಮೀಪ ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಮಾರನಹಳ್ಳಿ ಸಮೀಪ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಚಾಲಕ ಸಿಕ್ಕಿಹಾಕಿಕೊಂಡಿದ್ದು, ಚಾಲಕನನ್ನು ಕ್ರೇನ್ ಸಹಾಯದಿಂದ ಮೇಲೆತ್ತಲು ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು ಸುಮಾರು ಎರಡು ಗಂಟೆಯಿಂದ ಹರಸಾಹಸ ಪಡುತ್ತಿದ್ದಾರೆ.

ಮುಂದೆ ಓದಿ