Thursday, 15th May 2025

ಆಂಧ್ರದಲ್ಲಿ ಭೀಕರ ಅಪಘಾತ: ಆರು ಮಂದಿ ಸಾವು

ಕೃಷ್ಣಜಿಲ್ಲೆ(ಆಂಧ್ರ ಪ್ರದೇಶ): ಆಟೋರಿಕ್ಷಾಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಮೃತ ಪಟ್ಟು ಆರು ಮಂದಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಕೃಷ್ಣಜಿಲ್ಲೆಯ ಗೋಪಲ್ಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಗಾಯಗೊಂಡವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿ ಚಾಲಕ ನಾಪತ್ತೆಯಾಗಿದ್ದು ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.

ಮುಂದೆ ಓದಿ