Wednesday, 14th May 2025

ಇಂದು ಸಿಎಂ ಬಿಎಸ್’ವೈರಿಂದ ಗ್ರಾಪಂ ಅಧ್ಯಕ್ಷರು, ಪಿಡಿಒ ಜತೆ ಸಂವಾದ

ಬೆಂಗಳೂರು: ಕರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಇದುವರೆಗೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದ ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಯಲಿದೆ.

ಮುಂದೆ ಓದಿ