ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿ, ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿ ದ್ದಾರೆ. ಸೋಮವಾರ ರಾತ್ರಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹ ಗಳನ್ನು ಹೊರಗೆ ತಂದಿದ್ದಾರೆ. ಮೃತರು ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು, ಕಟ್ಟಡ ನಿರ್ಮಾಣ ಕೆಲಸ ದಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. […]