Sunday, 11th May 2025

ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ

ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮಂಗಳವಾರ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿ, ಕಾಡುಗಳ್ಳನ ಮುಖ್ಯ ಸಹಚರರಾಗಿದ್ದರು.  ‘ಪಾಲಾರ್ ಬಾಂಬ್ ಸ್ಫೋಟ’ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಜ್ಞಾನಪ್ರಕಾಶ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ‌ಬಳಿಕ, ಸುಪ್ರೀಂ ಕೋರ್ಟ್ 2014ರಲ್ಲಿ ಗಲ್ಲು ಶಿಕ್ಷೆ ಬದಲಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕಳೆದ ಮೂರು ವರ್ಷಗಳಿಂದ ಶ್ವಾಸಕೋಸ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಮಾನವೀಯತೆ ಆಧಾರದ […]

ಮುಂದೆ ಓದಿ