Monday, 12th May 2025

ಹಿರಿಯ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಆಪ್ತನ ಗುಂಡಿಕ್ಕಿ ಹತ್ಯೆ

ಭೋಪಾಲ್‌: ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರ ಆಪ್ತ ಮನೋಜ್ ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ನಗರದ ಚಿಮನ್ ಬಾಗ್ ಕ್ರಾಸಿಂಗ್‌ಗೆ ಬೈಕ್‌ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಕೊಲೆಯ ಹಿಂದಿನ ಕಾರಣ ‘ಹಳೆಯ ದ್ವೇಷ’ವಾಗಿರಬಹುದು ಎಂದು ಹೇಳಿದ್ದಾರೆ. ಸದ್ಯ ತಲೆ ಮರೆಸಿ ಕೊಂಡಿರುವ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ […]

ಮುಂದೆ ಓದಿ