ಬೆಂಗಳೂರು: ರಾಜ್ಯದಲ್ಲಿ 2 ಹಂತಗಳ ಲೋಕಸಭಾ ಚುನಾವಣೆ ಮುಗಿಯಿತು. ಆದರೆ ಈ ಹಿಂದೆ ನಿರ್ಧರಿಸಿದಂತೆ ಜೂ.6ರ ವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದಾಗ ಕೇಂದ್ರ ಚುನಾವಣ ಆಯೋಗ ಸ್ಪಷ್ಟವಾಗಿ ಹೇಳಿತ್ತು. ವೇಳಾಪಟ್ಟಿ ಪ್ರಕಟಗೊಂಡ ಕ್ಷಣದಿಂದ ಜೂನ್ 6ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಹಾಗಿದ್ದಾಗ ರಾಜ್ಯದಲ್ಲಿ ಮತದಾನ ಮುಗಿದಿದೆ ಎಂದು ನೀತಿ ಸಂಹಿತೆ ಸಡಿಲಿಕೆ ಮಾಡಲು ಆಗುವುದಿಲ್ಲ ಎಂದರು. ಏನಾದರೂ ವಿಶೇಷ […]