ರಾಯ್‌ಪುರ: ಛತ್ತೀಸ್‌ಗಢ (Chhattisgarh)ದಲ್ಲಿ ಭಾನುವಾರ (ಜ. 12) ಭದ್ರತಾ ಪಡೆಯ ಸಿಬ್ಬಂದಿ ಭರ್ಜರಿ ಬೇಟೆಯಾಡಿದ್ದು, ಮೂವರು ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಛತ್ತೀಸ್‌ಗಢದ ಬಿಜಾಪುರ (Bijapur) ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ʼʼಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತುʼʼ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರ್‌ರಾಜ್ ಪಿ. ಮಾಹಿತಿ ನೀಡಿದ್ದಾರೆ (Maoists […]