Sunday, 11th May 2025

ನಕಾಶಿಪಾರಾದಲ್ಲಿ ಗುಂಡಿನ ಚಕಮಕಿ: 15 ಜನರಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನಕಾಶಿಪಾರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕಾಂಗ್ರೆಸ್‌ಗೆ ರಾಜಕೀಯ ಸಂಬಂಧ ಹೊಂದಿರುವ ಎರಡು ಕುಟುಂಬಗಳಿಗೆ ಸೇರಿದವರು ಎಂದು ವರದಿಯಾಗಿದೆ. ಗಾಯಗೊಂಡ 15 ಮಂದಿಯಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಮೂರು ಸ್ಥರಗಳ ಪಂಚಾಯ್ತಿ ಚುನಾವಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. […]

ಮುಂದೆ ಓದಿ