ಚನ್ನಪಟ್ಟಣ : ಕ್ಷೇತ್ರದ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಕ್ಕೂರು, ಬಾಣಗಹಳ್ಳಿ, ಸೋಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಮುಖ ಮುಖಂಡರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಮಂಗಳವಾರ ಸಭೆ ನಡೆಸಿ, ಪಕ್ಷ ಸಂಘಟನೆ ಮತ್ತು ಪಕ್ಷ ಬಲವರ್ಧನೆ ಬಗ್ಗೆ ಚರ್ಚಿಸಿದರು. ನಂತರ ಚನ್ನಪಟ್ಟಣ ಕ್ಷೇತ್ರಕ್ಕೆ ನನಗೆ ಟಿಕೆಟ್ ಆಗಲಿದೆ ಎಂದಿದ್ದ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯೋಗೇಶ್ವರ್ ಅವರ ಹೇಳಿಕೆಯನ್ನು ನಾನು ಗ್ರಹಿಸಿದ್ದೇನೆ. ಅವರು ಸ್ಪಷ್ಟವಾಗಿ ಹೇಳಿದ್ದಾರೆ, ಜೆಡಿಎಸ್ […]