Thursday, 15th May 2025

ಬಸ್ ಅಪಘಾತ: ಶಬರಿಮಲೆ ಯಾತ್ರಿಕರಿಗೆ ಗಾಯ

ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿ ದಂತೆ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 44 ಯಾತ್ರಾರ್ಥಿಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ. ಗಂಭೀರ ಗಾಯಗೊಂಡ ಎಂಟು ವರ್ಷದ ಬಾಲಕ ಸೇರಿದಂತೆ ಮೂವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸ ಲಾಗಿದ್ದು, 18 ಮಂದಿಯನ್ನು ಇಲ್ಲಿನ ಜನರಲ್ ಆಸ್ಪತ್ರೆಗೆ ಮತ್ತು ಉಳಿದವರನ್ನು ಸಮೀಪದ ಪೆರಿನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. […]

ಮುಂದೆ ಓದಿ