Viral Post: ಹೈದರಾಬಾದ್ನ ಸಂಧ್ಯ ಥಿಯೇಟರ್ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅರೆಸ್ಟ್ ಆಗಿದ್ದು ಎಲ್ಲರಿಗೂ ಶಾಕ್ ಕೊಟ್ಟಿತ್ತು. ಪುಷ್ಪ 2 (Pushpa 2 The Rule) ಸಿನಿಮಾದ ಸಕ್ಸಸ್ ಖುಷಿಯಲ್ಲಿ ಇರುವಾಗಲೇ ನಟ ಅಲ್ಲು ಅರ್ಜುನ್ (Allu Arjun) ಅವರು ಅರೆಸ್ಟ್ ಆಗಿದ್ದರು. ಅಲ್ಲು ಅರ್ಜುನ್ ಅವರು ತಮ್ಮ ಮನೆಯಲ್ಲಿ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾಗಲೇ ಬಂದಂತಹ ಪೊಲೀಸರು (Police) ನಟನನ್ನು ಅರೆಸ್ಟ್ ಮಾಡಿ ಕರೆದುಕೊಂಡು ಹೋಗಿದ್ದರು.