Emergency Landing: ಜೋಗ್ದಂಡ್ ಅವರನ್ನು ಮುನ್ಸಿಯಾರಿಗೆ ರಾಜೀವ್ ಕುಮಾರ್ ತಮ್ಮ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಹಾನಿಯಾಗದೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಷ ಮಾಡಿದೆ. ಇನ್ನು ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾರು ಸುರಕ್ಷಿತವಾಗಿದ್ದಾರೆ. ಈ ಹೆಲಿಕಾಪ್ಟರ್ ತುರ್ತು ಭೂಸ್ಪರ್ಷಕ್ಕೆ ಕಾರಣ ಏನೆಂಬುದು ತಿಳಿದಿಲ್ಲ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಷ ಮಾಡಿರುವಂತೆ ಕಂಡು ಬಂದಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.