Wednesday, 14th May 2025

ಅಪಘಾತ: ಯಕ್ಷಗಾನದ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ನಿಧನ

ಸುಬ್ರಹ್ಮಣ್ಯ: ಕುಲ್ಕುಂದದಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಯಕ್ಷಗಾನದ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ನಿಧನರಾಗಿದ್ದಾರೆ. ಕುಲ್ಕುಂದದಲ್ಲಿ ಶಟಲ್ ಬ್ಯಾಡ್ಮಿಂಟನ್ ಅಭ್ಯಾಸಕ್ಕಾಗಿ ತಮ್ಮ ಸ್ನೇಹಿತರ ಮನೆಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಡವೆ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿಯಾಗಿದೆ. ರಾಮಚಂದ್ರ ಅವರ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತರಾಗಿದ್ದಾರೆ. ಮೃದು ಸ್ವಭಾವದ ರಾಮಚಂದ್ರ ಅರ್ಬಿತ್ತಾಯ ಅವರು ಯಕ್ಷಗಾನ ಗುರು ಹರಿನಾರಾಯಣ ಬೈಪಾಡಿತ್ತಾಯ ಅವರ ಸೋದರಳಿಯ. ಅವರ ಮನೆಯಲ್ಲೇ ಯಕ್ಷಗಾನ ಕಲಿತಿದ್ದರು. ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. […]

ಮುಂದೆ ಓದಿ