Monday, 12th May 2025

ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ನೇಮಕ

ನವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿಯಾಗಿರುವ ರುಚಿರಾ ಕಂಬೋಜ್‌ ಅವರನ್ನು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ. ಭಾರತೀಯ ವಿದೇಶಾಂಗ ಸೇವೆ(ಐಎಫ್‌ಎಸ್‌)ಯ 1987ರ ಬ್ಯಾಚ್‌ನ ಅಧಿಕಾರಿ ರುಚಿರಾ ಸದ್ಯ ಭೂತಾನ್‌ನಲ್ಲಿ ಭಾರತದ ರಾಯಭಾರಿ ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಶಾಶ್ವತ ಸದಸ್ಯರಾಗಿರುವ ಟಿ.ಎಸ್‌.ತಿರುಮೂರ್ತಿ ಅವರ ಸ್ಥಾನವನ್ನು ರುಚಿರಾ ತುಂಬಲಿದ್ದಾರೆ. ಶೀಘ್ರವೇ ರುಚಿರಾ ಅವರು ಶಾಶ್ವತ ಸದಸ್ಯೆಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಮುಂದೆ ಓದಿ