ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಮಾತ ನಾಡಿ, ಕಳೆದ 30 ವರ್ಷಗಳಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸು ವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು ಸಹ ಸರಕಾರ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು. ಅಹಿಂದ ಮುಖಂಡ ವಿರೂಪಾಕ್ಷ ಡ್ಯಾಗೇರಹಳ್ಳಿ ಮಾತನಾಡಿ, […]