Wednesday, 14th May 2025

ಗೋದಾಮಿನಲ್ಲಿ ಅಗ್ನಿ ಅವಘಡ: 11 ಕಾರ್ಮಿಕರು ಸಜೀವ ದಹನ

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ನ ಭೋಯಿಗುಡಾದಲ್ಲಿನ ಸ್ಕ್ರ್ಯಾಪ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, 11 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಮೃತ ಕಾರ್ಮಿಕರೆಲ್ಲರೂ ಬಿಹಾರದ ನಿವಾಸಿಗಳಾಗಿದ್ದು, ಜಂಕ್ ಗೋದಾಮಿ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ಉಪಸ್ಥಿತರಿದ್ದ ಹೈದರಾಬಾದ್ ಕೇಂದ್ರ ವಲಯ ಡಿಸಿಪಿ, ಎಲ್ಲಾ 11 ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಗಾಗಿ ಆಸ್ಪತ್ರೆಗೆ ಕೊಂಡೊ ಯ್ಯಲಾಗಿದೆ ಎಂದು ತಿಳಿಸಿದರು. ಸಿಕಂದರಾಬಾದ್​ನಲ್ಲಿ ಟಿಂಬರ್​​ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆ ಮತ್ತು ಬಿದಿರುಗಳು ಇರುವುದರಿಂದ ಬೆಂಕಿ ಮುಗಿ ಲೆತ್ತರಕ್ಕೆ ಚಿಮ್ಮಿದೆ. […]

ಮುಂದೆ ಓದಿ