ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಹಾಗೂ ಅಮಾನತುಗೊಂಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 51ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಯಶವಂತ ಕುಮಾರ್ ಅರ್ಜಿ ತಿರಸ್ಕರಿಸಿದ್ದಾರೆ. ಪಿಎಸ್‌ಐ ಹಗರಣದಲ್ಲಿ ಅಮೃತ್ ಪೌಲ್ 35ನೇ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಅಲ್ಲದೆ, ಪೌಲ್ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜತೆಗೆ ಹಗರಣಕ್ಕೆ ಸಂಬಂಧಿಸಿದ ಸಿಸಿ ಕೆಮರಾ […]