ಸಿಡ್ನಿ: ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಮೇಲೆ ಆಸ್ಟ್ರೇಲಿಯಾದಲ್ಲಿ ಅ.6ರಂದು ದಾಳಿ ನಡೆಸಲಾಗಿದ್ದು, ಚಾಕುವಿನಿಂದ 11 ಬಾರಿ ಇರಿದು ಹತ್ಯೆಗೆ ಯತ್ನಿಸಲಾಗಿದೆ. ವಿದ್ಯಾರ್ಥಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಶುಭಮ್ ಗರ್ಗ್, ಉತ್ತರ ಪ್ರದೇಶದ ಆಗ್ರಾದವರು. ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ದಲ್ಲಿ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಗರ್ಗ್, ತಮ್ಮ ನಿವಾಸಕ್ಕೆ ವಾಪಸ್ ಆಗು ತ್ತಿದ್ದಾಗ ಸಿಡ್ನಿಯಲ್ಲಿ ದಾಳಿಗೊಳಗಾಗಿದ್ದಾರೆ. ಈ ಸಂಬಂಧ 27 ವರ್ಷದ ಡೆನಿಯಲ್ ನೋರ್‌ವುಡ್ ಎಂಬಾತನನ್ನು ಘಟನಾ ಸ್ಥಳದಲ್ಲೇ ಬಂಧಿಸಿ, […]