Naga Chaitanya: ದಕ್ಷಿಣ ಚಿತ್ರರಂಗದ ಖ್ಯಾತ ನಟ ನಾಗ ಚೈತನ್ಯ(Naga Chaitanya) ಹಾಗೂ ಬಹುಭಾಷಾ ನಟಿ ಶೋಭಿತಾ ಧೂಳಿಪಾಲ(Sobhita Dhulipala) ದಾಂಪತ್ಯ ಜೀವನ ಆರಂಭಿಸಿದ್ದಾರೆ. ಬುಧವಾರ ತಡ ರಾತ್ರಿ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಅನ್ನಪೂರ್ಣ ಸ್ಟುಡಿಯೋದಲ್ಲಿ ಜೋಡಿ ಸಾಂಪ್ರದಾಯಿಕ ಹಿಂದೂ ಶೈಲಿಯಲ್ಲಿ ಹಸೆಮಣೆ ಏರಿದ್ದಾರೆ. ಈ ಸಮಾರಂಭದಲ್ಲಿ ಕುಟುಂಬದವರು, ಚಿತ್ರರಂಗದ ಗಣ್ಯರು, ಆಪ್ತರು, ಬಂಧುಗಳು ಪಾಲ್ಗೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಕೂಡಾ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳನ್ನು ಆಶೀರ್ವದಿಸಿದ್ದಾರೆ.
Viral Video: ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ನಾಗ ಚೈತನ್ಯ(Naga Chaitanya) ಹಾಗೂ ಶೋಭಿತಾ ಧೂಳಿಪಾಲ(Sobhita Dhulipala) ನೆನ್ನೆ ಅಂದರೆ ಡಿಸೆಂಬರ್ 4ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.....