Tuesday, 13th May 2025

ಅಸಭ್ಯ ವರ್ತನೆ: ನಟ ಶ್ರೀಜಿತ್ ರವಿ ಬಂಧನ

ತಿರುವನಂತಪುರ: ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 4ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಬಳಿಕ ರವಿ ಅವರನ್ನು ಬಂಧಿಸಲಾಗಿದೆ. 2016ರಲ್ಲಿ ಪಾಲಕ್ಕಾಡ್ ಪೊಲೀಸರು ಇಂತಹದೇ ಪ್ರಕರಣದಲ್ಲಿ ರವಿಯನ್ನು ಬಂಧಿಸಿದ್ದರು.

ಮುಂದೆ ಓದಿ