Thursday, 15th May 2025

ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ : ದೇಶಾದ್ಯಂತ ಸೋಮವಾರ ಶ್ರೀ ಕೃಷ್ಣ ಪರಮಾತ್ಮನ ಜನ್ಮಾಷ್ಟಮಿ ಅದ್ಧೂರಿಯಾಗಿ ನಡೆಯುತ್ತಿದ್ದು, ಜನರು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಹಬ್ಬ ಆಚರಿಸಲಾಗುತ್ತಿದೆ. ದೇಶದ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯರು, ಸೆಲೆಬ್ರಿಟಿಗಳು ದೇಶವಾಸಿಗಳಿಗೆ ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರಿದ್ದಾರೆ. ದೇಶಾದ್ಯಂತ ಕೃಷ್ಣ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಕೃಷ್ಣನಂತೆ ವೇಷ ತೊಡಿಸಿ ಸಂಭ್ರಮಿಸುತ್ತಿದ್ದಾರೆ. ಮಥುರ, ಇಸ್ಕಾನ್ ದೇವಾಲಯ ಸೇರಿದಂತೆ ಶ್ರೀಕೃಷ್ಣನ ದೇವಾಲಯಗಳಲ್ಲಿ ಇಂದು ಮುಂಜಾನೆಯಿಂದ ರಾತ್ರಿಯವರೆಗೆ ಹಲವು ವಿಶೇಷ ಕಾರ್ಯಕ್ರಮಗಳು, ಪೂಜೆ ಪುನಸ್ಕಾರಗಳು ನೆರವೇರುತ್ತಿವೆ.

ಮುಂದೆ ಓದಿ