ತುಮಕೂರು: ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ರಾಜ್ಯಾದ್ಯಂತ 40 ಕ್ಷೇತ್ರಗಳಲ್ಲಿ ಮುಂದಿನ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜು ಎಸ್.ಡಿ., ಪ್ರಭಾರ ಅಧ್ಯಕ್ಷ ಡಿ.ಕೆ.ಗಂಗಾಧರಯ್ಯ ಅವರುಗಳು ಸರಕಾರಕ್ಕೆ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಕಾಡುಗೊಲ್ಲರ ಮಕ್ಕಳಿಗೆ ಜಾತಿ ಪ್ರಮಾಣ ಪತ್ರ ವಿತರಿಸಲು ಸುತ್ತೊಲೆ, ಜತೆಗೆ ಕಾಡುಗೊಲ್ಲ ಅಭಿವೃದ್ದಿ ನಿಗಮಕ್ಕೆ ಚಾಲನೆ ನೀಡಬೇಕು. ಬುಡಕಟ್ಟು ಪಂಗಡಕ್ಕೆ ಸೇರಿದ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡದ ಜಾತಿ ಪಟ್ಟಿಗೆ ಸೇರಿಸಬೇಕೆಂಬುದು ನಮ್ಮ […]