Syria Crisis: ಉತ್ತರ ಸಿರಿಯಾ(Syria)ದಲ್ಲಿರುವ ಅಲೆಪ್ಪೊ ನಗರದ ಮೇಲೆ ಜಿಹಾದಿ ಪಡೆಗಳು ದಾಳಿ ನಡೆಸಿದ ಬಳಿಕ, ಈಗ ಸಿರಿಯಾದತ್ತ ಮತ್ತೊಮ್ಮೆ ಜಗತ್ತಿನ ದೃಷ್ಟಿ ನೆಟ್ಟಿದೆ. ಅಲೆಪ್ಪೊ ಇರುವ ಕಾರ್ಯತಂತ್ರದ ತಾಣ ಮತ್ತು ಅದು ಹೊಂದಿರುವ ಐತಿಹಾಸಿಕ ಮಹತ್ವಗಳ ಕಾರಣದಿಂದಾಗಿ ಅದು ವ್ಯಾಪಾರ, ಸಂಸ್ಕೃತಿ ಮತ್ತು ಈ ಪ್ರದೇಶದ ಮೇಲಿನ ನಿಯಂತ್ರಣಕ್ಕೆ ಮುಖ್ಯ ಸ್ಥಳವಾಗಿದ್ದು, ನವೆಂಬರ್ 27ರಂದು, ಅಲ್ ಖೈದಾ ಜೊತೆ ಸಂಪರ್ಕ ಹೊಂದಿರುವ ಉಗ್ರಗಾಮಿ ಗುಂಪಾದ ತಹ್‌ರಿರ್ ಅಲ್ ಶಮ್ ಮತ್ತು ಸಿರಿಯನ್ ನ್ಯಾಷನಲ್ ಆರ್ಮಿಗಳು ಉಗ್ರರು ಅಲೆಪ್ಪೊ ನಗರವನ್ನು ಗುರಿಯಾಗಿಸಿ, ದಾಳಿ ನಡೆಸಲಾರಂಭಿಸಿದೆ.
ದುಬೈ: ಜರ್ಮನಿಯಿಂದ ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕನೋರ್ವ ಮೆಕ್ಕಾವನ್ನು ತಲುಪಿ ಮೃತಪಟ್ಟಿದ್ದಾನೆ ಎಂದು ಗಲ್ಫ್ ಮಾಧ್ಯಮಗಳು ವರದಿ ಮಾಡಿವೆ. ಜರ್ಮನಿಯಲ್ಲಿ ನೆಲೆಸಿದ್ದ ಹೋಮ್ಸ್‌ನ 53...