Wednesday, 14th May 2025

ಆಲ್ರೌಂಡರ್‌ ಕಪಿಲ್‌ ದೇವ್’ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತದ ಕ್ರಿಕೆಟ್ ತಂಡಕ್ಕೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ಮಾಜಿ ನಾಯಕ, ಆಲ್ರೌಂಡರ್‌ ಕಪಿಲ್‌ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ಕಪಿಲ್ ದೇವ್ ಅವರನ್ನು ನವದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪಿಲ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ. ಈ ಕುರಿತು ಪತ್ರಕರ್ತೆ ಟೀನಾ ಥಾಕರ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಮುಂದೆ ಓದಿ