Saturday, 10th May 2025

Bheemanakatte Mutt: ನಂದಿನಿ ಪತ್ತಿನ ಸಹಕಾರ ಸಂಘದ ದಶಮಾನೋತ್ಸವ

ತುಮಕೂರು: ಹಣಕಾಸು ಸಂಸ್ಥೆಗಳನ್ನು ಸ್ಥಾಪಿಸುವುದು ಸುಲಭ, ಆದರೆ ನಿರ್ವಹಣೆ ಬಹಳ ಕಷ್ಟ. ಅದರಲ್ಲೂ ಗ್ರಾಹಕರ ನಂಬಿಕೆ, ವಿಶ್ವಾಸ ಉಳಿಸಿಕೊಂಡು ಜವಾಬ್ದಾರಿಯುತವಾಗಿ ಮುನ್ನಡೆಯುವುದು ಹಾಗೂ ಉತ್ತರದಾಯಿತ್ವ ಹೊಂದಿರುವುದು ಅತ್ಯಗತ್ಯ ಮತ್ತು ಅನಿವಾರ್ಯ ಎಂದು ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರತೀರ್ಥ ಶ್ರೀಪಾದಂಗಳು ಅಭಿಪ್ರಾಯಪಟ್ಟರು. ಅವರು ತುಮಕೂರಿನ ಚಿಕ್ಕಪೇಟೆಯ ಪಂಚಾಂಗದ ಬೀದಿಯಲ್ಲಿರುವ ಶ್ರೀನಿವಾಸ ಪ್ರಾರ್ಥನಾ ಮಂದಿರದಲ್ಲಿ ಏರ್ಪಟ್ಟಿದ್ದ ತುಮಕೂರು ನಂದಿನಿ ಪತ್ತಿನ ಸಹಕಾರ ಸಂಘದ ದಶಮಾನೋತ್ಸವ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು. ಸಹಕಾರ ಸಂಘಗಳು ಗ್ರಾಹಕ ಸ್ನೇಹಿಯಾಗಿರಬೇಕು. ಗ್ರಾಹಕರೊಂದಿಗೆ ಉತ್ತಮ ಒಡನಾಟ, […]

ಮುಂದೆ ಓದಿ