ಶ್ರೀನಗರ: ‘ವೈಯಕ್ತಿಕ ಮಾಹಿತಿ ಕಳವು ಪ್ರಕರಣಗಳು ಹೆಚ್ಚುತ್ತಿರುವ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಸುರಕ್ಷಿತ ವಲ್ಲ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಉಗ್ರ ಸಂಘಟನೆಗಳು ಹೊಸ ಮೆಸೆಜಿಂಗ್ ಆಯಪ್‌ಗಳ ಮೊರೆ ಹೋಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಹಾಗೂ ಭದ್ರತಾ ಸಿಬ್ಬಂದಿಯ ಎದುರು ಶರಣಾದ ಉಗ್ರರಿಂದ ಮಾಹಿತಿ ಕಲೆ ಹಾಕಿದಾಗ ಮೂರು ಹೊಸ ಆಯಪ್‌ಗಳನ್ನು ಬಳಸುತ್ತಿರುವುದು ಗೊತ್ತಾಗಿದೆ’ ಎಂದು ಹೇಳಿದ್ದಾರೆ. ಅಮೆರಿಕ, ಯುರೋಪ್ ಹಾಗೂ ಟರ್ಕಿಯ ಕಂಪನಿಗಳು ಅಭಿವೃದ್ಧಿಪಡಿಸಿರುವ ಆಯಪ್‌ಗಳನ್ನು ಅವರು ಬಳಕೆ ಮಾಡು ತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ […]