Monday, 12th May 2025

ಉನಾ ಜಿಲ್ಲೆಯಲ್ಲಿ ಭಾರೀ ಸ್ಫೋಟ: ಆರು ಮಂದಿ ಸಾವು, 12 ಜನರಿಗೆ ಗಾಯ

ಶಿಮ್ಲಾ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟಕ್ಕೆ 6 ಮಂದಿ ಮೃತಪಟ್ಟು, 12 ಜನರು ಗಂಭೀರವಾಗಿ ಗಾಯಗೊಂಡಿ ದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಉನಾದ ಬತು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಇದರಲ್ಲಿ 6 ಜನರು ಸಜೀವ ದಹನವಾಗಿದ್ದಾರೆ. 12 ಜನರು ಸ್ಪೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ವರದಿಯಾಗಿದೆ. ಸ್ಫೋಟ ಸಂಭವಿಸಿದ ಕಾರ್ಖಾನೆಯನ್ನು ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ. […]

ಮುಂದೆ ಓದಿ