ನವದೆಹಲಿ: ಆಫ್ಘಾನಿಸ್ಥಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕೂಡ ಮಹತ್ವದ ಸಭೆ ನಡೆಯಲಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ ಉಂಟಾಗುವ ಪರಿಣಾಮಗಳ ಕುರಿತಂತೆ ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮತ್ತೆ ತುರ್ತು ಸಭೆ ಕರೆಯಲಾಗಿದೆ. ಉಗ್ರರ ಉಪಟಳ ಹೆಚ್ಚಾಗುವ ಆತಂಕದಿಂದ ಪ್ರಧಾನಿ ಮೋದಿ ತುರ್ತು ಸಂದೇಶ ರವಾನಿಸಿ ದ್ದಾರೆ. ಮಂಗಳವಾರದ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಎಸ್ […]